ಮುಂದಿನ ಎರಡೂವರೆ ವರ್ಷಗಳವರೆಗೆ ಯಡಿಯೂರಪ್ಪನವರೇ ಸಿಎಂ: ಡಿಸಿಎಂ ಸವದಿ - lakshman savadi bantwal News
ಬಂಟ್ವಾಳ: ಯುಗಾದಿ ಬಳಿಕ ಸಿಎಂ ಬದಲಾವಣೆ ಆಗುತ್ತಾರೆ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ, 'ಯಾವುದೇ ಊಹಾಪೋಹಗಳಿಗೆ ಕಿವಿಗೊಡುವುದು ಬೇಡ. ಮುಂದಿನ ಎರಡೂವರೆ ವರ್ಷಗಳವರೆಗೆ ಯಡಿಯೂರಪ್ಪನವರೇ ಸಿಎಂ ಆಗಿರುತ್ತಾರೆ. ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನಪಡಿಸುವ ಪ್ರಯತ್ನ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ' ಎಂದು ಹೇಳಿದರು.