ಅಕ್ರಮ ಮದ್ಯ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಮುಂದುವರಿದ ಪ್ರತಿಭಟನೆ - Protest in raichur
ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಹೋರಾಟ 6 ದಿನಕ್ಕೆ ಕಾಲಿಟ್ಟಿದೆ. ಇಂದು ಸಹ ಜಿಲ್ಲಾದ್ಯಂತ ವಿವಿಧ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಸುತ್ತಿರುವ ಬಗ್ಗೆ ಪಟ್ಟಿ ನೀಡುವ ಮೂಲಕ ಪ್ರತಿಭಟನೆ ನಡೆಸಿದ್ರು. ಕಳೆದ ಫೆ.11ರಂದು ಸುಮಾರು 150ಕ್ಕೂ ಹೆಚ್ಚು ಮಹಿಳೆಯರು ಅಕ್ರಮ ಮದ್ಯ ಮಾರಾಟ ನಿಷೇಧಿಸುವಂತೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಜಿಲ್ಲಾಧಿಕಾರಿಗಳು ಅಕ್ರಮ ಮದ್ಯ ಮಾರಾಟ ತಡೆಯುವುದಾಗಿ ಭರವಸೆ ನೀಡಿದ್ರು. ಆದರೂ ಜಿಲ್ಲೆಯ ಹಲವು ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಅಕ್ರಮ ಮದ್ಯ ಮಾರಾಟ ತಡೆಯಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.