ದೇವೆಗೌಡರ ಹೆಲಿಕಾಪ್ಟರ್ ಪರಿಶೀಲಿಸಿದ ಚುನಾವಣಾಧಿಕಾರಿಗಳು - undefined
ಭಾನುವಾರ ಉತ್ತರಕನ್ನಡ ಜಿಲ್ಲೆಗೆ ಆಗಮಿಸಿದ್ದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಹೆಲಿಕಾಪ್ಟರ್ನ್ನು ಹೊನ್ನಾವರದ ಬಳಿ ಹೆಲಿಪ್ಯಾಡ್ನಲ್ಲಿ ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದರು. ಹೆಲಿಕಾಪ್ಟರ್ ಇಳಿಯಲು ಹೊನ್ನಾವರದ ರಾಮತೀರ್ಥದ ಬಳಿ ವ್ಯವಸ್ಥೆ ಮಾಡಲಾಗಿತ್ತು. ಬೆಂಗಳೂರಿನಿಂದ ಆಗಮಿಸಿದ್ದ ದೇವೇಗೌಡರು ಹೆಲಿಕಾಪ್ಟರ್ನಿಂದ ಇಳಿಯುತ್ತಿದ್ದಂತೆ ಜಿಲ್ಲಾ ಚುನಾವಣಾಧಿಕಾರಿಗಳು ಹೆಲಿಕಾಪ್ಟರ್ ಪರಿಶೀಲನೆ ನಡೆಸಿದರು.