ಹೊಸ ವರ್ಷಾಚರಣೆ ಹಿನ್ನೆಲೆ ಸಿದ್ಧಗಂಗಾ ಮಠಕ್ಕೆ ಭಕ್ತರ ದಂಡು
ತುಮಕೂರು : ನೂತನ ವರ್ಷದ ಮೊದಲ ದಿನವಾದ ಇಂದು ಸಿದ್ಧಗಂಗಾ ಮಠಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದರು. ಭಕ್ತರು ಮಠಕ್ಕೆ ಭೇಟಿ ನೀಡಿದ್ದ ವೇಳೆ ಮಾಸ್ಕ್ ಧರಿಸಿ ಕೊರೊನಾ ನಿಯಮ ಪಾಲಿಸಿದ್ದಾರೆ. ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆಯನ್ನ ವಿಶೇಷವಾಗಿ ಅಲಂಕರಿಸಲಾಗಿತ್ತು.