’ಪೊಗರು’ ಬಗ್ಗೆ ಆ್ಯಕ್ಷನ್ ಪ್ರಿನ್ಸ್ ಅಭಿಪ್ರಾಯ ಹೀಗಿದೆ! - pogaru film shooting latest news
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ಪೊಗರು ಚಿತ್ರದ ಟಪಾಂಗುಚ್ಚಿ ಸಾಂಗ್ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿದೆ. ಮೋಹನ್ ಬಿ ಕೆರೆ ಸ್ಟೂಡಿಯೋದಲ್ಲಿ ಹಾಕಿರುವ ಕಲರ್ಫುಲ್ ಸೆಟ್ನಲ್ಲಿ ಆ್ಯಕ್ಷನ್ ಪ್ರಿನ್ಸ್ ರಶ್ಮಿಕಾ ಮಂದಣ್ಣ ಅವರನ್ನು ಟೀಸ್ ಮಾಡ್ಕೊಂಡು ಸಖತಾಗಿ ಸ್ಟೆಪ್ ಹಾಕಿದ್ದಾರೆ. ಇನ್ನು ಈ ಹಾಡಿನ ಶೂಟಿಂಗ್ ಕಂಪ್ಲೀಟ್ ಆದ್ರೆ ಪೊಗರು ಚಿತ್ರ ಶೂಟಿಂಗ್ ಕಂಪ್ಲೀಟ್ ಆಗಲಿದ್ದು, ಇದೇ ಮೊದಲ ಬಾರಿಗೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪೊಗರು ಚಿತ್ರದ ಬಗ್ಗೆ ಈಟಿವಿ ಭಾರತ ಜೊತೆ ಮನಬಿಚ್ಚಿ ಮಾತನಾಡಿದ್ದಾರೆ.