ಮೂರು ಸಾವಿರ ಮಠದಲ್ಲಿ ಸ್ವಚ್ಛತಾ ಕಾರ್ಯ ಮಾಡಿದ ದಿಂಗಾಲೇಶ್ವರ ಸ್ವಾಮೀಜಿ: ಸಾರ್ವಜನಿಕರಿಂದ ಪ್ರಶಂಸೆ - Dingaleswara Swamiji who did the cleaning work
ಹುಬ್ಬಳ್ಳಿ: ಮೂರುಸಾವಿರ ಮಠದ ಉತ್ತರಾಧಿಕಾರ ವಿವಾದ ಹಿನ್ನೆಲೆ, ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಸತ್ಯದರ್ಶನ ಸಭೆಗೆ ಆಗಮಿಸಿದ್ದ ಭಕ್ತಾಧಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟದ ಬಳಿಕ ಬಿದ್ದಿದ್ದ ಕಸವನ್ನು ಸ್ವತಃ ದಿಂಗಾಲೇಶ್ವರ ಸ್ವಾಮೀಜಿ ಗೂಡಿಸುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.