ನಾಳೆ ಬಿಜೆಪಿಗೆ ಅನರ್ಹರು...ಬಿಜೆಪಿ, ಕಾಂಗ್ರೆಸ್ ನಾಯಕರು ಏನ್ ಹೇಳ್ತಾರೆ...? - ಅನರ್ಹ ಶಾಸಕರ ಸುದ್ದಿ
ರಾಜ್ಯದ 17 ಮಂದಿ ಅನರ್ಹ ಶಾಸಕರು ಉಪ ಚುನಾವಣೆಯಲ್ಲಿ ಸ್ಪರ್ಧೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ರಾಜಕೀಯ ವಿದ್ಯಮಾನಗಳು ಬಿರುಸುಗೊಂಡಿವೆ. ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರವನ್ನ ಕೆಡವಿ ಬಿಜೆಪಿ ಅಧಿಕಾರಕ್ಕೆ ಬರಲು ನೆರವಾಗಿದ್ದ 17 ಮಂದಿ ಅನರ್ಹ ಶಾಸಕರಿಗೆ ಕೇಸರಿ ಪಕ್ಷದಿಂದ ಇನ್ನೂ ಟಿಕೆಟ್ ಕನ್ಫರ್ಮ್ ಆಗಿಲ್ಲ. ಆದ್ರೆ ನಾಳೆ ಎಲ್ಲಾ ಅನರ್ಹ ಶಾಸಕರು ಬಿಜೆಪಿಗೆ ಸೇರೋದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ...