ಆನೇಕಲ್ನಲ್ಲಿ ದಲಿತರ ಮೇಲಿನ ದೌರ್ಜನ್ಯ ಕಡಿವಾಣಕ್ಕೆ ಕ್ರಮ: ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಭರವಸೆ - Land Acquisition
ಆನೇಕಲ್ ಸುತ್ತ ಭೂಮಿ ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಅಮಾಯಕ ದಲಿತರ ಭೂಮಿಗಳನ್ನ ನಕಲಿ ದಾಖಲೆ ಸೃಷ್ಟಿಸಿ ಭೂ ಸ್ವಾಧೀನ ಪಡಿಸಿಕೊಂಡಿದ್ದು, ಆಂಧ್ರದ ವ್ಯಕ್ತಿಗಳಿಗೆ ಮಾರಾಟ ಮಾಡಲಾಗಿದೆ ಎನ್ನಲಾಗಿದೆ. ಜಿಗಣಿಯಲ್ಲಿ ಪಿವಿಸಿ ಸಂಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಮಾಡಿತ್ತು. ಈ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಅವರು ಆನೇಕಲ್ ತಾಲೂಕಿನ ಕಂದಾಯ, ಸರ್ವೇ, ಪೊಲೀಸ್ ಇಲಾಖೆಯ ಅಧಿಕಾರಿಗಳನ್ನು ತಾಲೂಕು ಪಂಚಾಯ್ತಿಯಲ್ಲಿ ಸಭೆ ಕರೆದು ಸಮಸ್ಯೆಗಳ ಕುರಿತು ದೂರು ಆಲಿಸಿದ್ದಾರೆ.