ಕರ್ನಾಟಕ

karnataka

ETV Bharat / videos

ಫೆ. 8-9ರಂದು ಶಿವಮೊಗ್ಗದಲ್ಲಿ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ - CS Shadakshari, President of the State Government Employees Union

By

Published : Feb 3, 2021, 4:09 PM IST

ಶಿವಮೊಗ್ಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯನ್ನು ಫೆ. 8 ಮತ್ತು 9ರಂದು ನಗರದ ನೆಹರೂ ಕ್ರೀಡಾಂಗಣ, ನೌಕರರ ಸಂಘದ ಸಭಾಂಗಣ ಹಾಗೂ ಕುವೆಂಪು ರಂಗಮಂದಿರದ ಸಮಾನಾಂತರ ವೇದಿಕೆಗಳಲ್ಲಿ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದ್ದಾರೆ. ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಆನ್‍ಲೈನ್ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ. ಸ್ಪರ್ಧೆಗಳಲ್ಲಿ ಭಾಗವಹಿಸುವವರು ಆನ್‍ಲೈನ್​ನಲ್ಲಿ (http://bit.ly/smgsportss2021) ನೋಂದಣಿ ಮಾಡಿಕೊಳ್ಳುವಂತೆ ವಿನಂತಿಸಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ 2 ದಿನಗಳ ಒಒಡಿ ಸೌಲಭ್ಯದ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಕ್ರಮವನ್ನು ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟಿಸಲಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಕ್ರೀಡಾ ಜ್ಯೋತಿ ಸ್ವೀಕರಿಸುವರು ಎಂದು ಮಾಹಿತಿ ನೀಡಿದ್ದಾರೆ.

ABOUT THE AUTHOR

...view details