ಡಿಕೆಶಿ ಬಂಧನ: ಧಾರವಾಡದಲ್ಲಿ ರಸ್ತೆಗಿಳಿದ ಕಾಂಗ್ರೆಸ್ ಕಾರ್ಯಕರ್ತರು - D.K Shivkumar arrest
ಡಿಕೆಶಿ ಬಂಧನ ಹಿನ್ನೆಲೆ ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಳಿಕ ಪುನಃ ನಗರದ ಕೊರ್ಟ್ ವೃತ್ತದಲ್ಲಿ ರಸ್ತೆ ತಡೆದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕೆಲ ಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.