ಡಿಕೆಶಿ ಬಂಧನ: ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ವಕೀಲರ ಪ್ರತಿಭಟನೆ - ವಕೀಲರು ಪ್ರತಿಭಟನೆ
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಬಂಧಿಸುವ ಮೂಲಕ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ವಕೀಲರು ಪ್ರತಿಭಟನೆ ನಡೆಸಿದರು. ಪಕ್ಷಾತೀತವಾಗಿ ಇಡಿ, ಐಟಿ ಹಾಗೂ ಸಿಬಿಐ ಸಂಸ್ಥೆಗಳು ನಡೆದುಕೊಂಡಿಲ್ಲ. ರಾಜಕೀಯ ಪ್ರೇರಿತವಾಗಿ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಿದೆ ಎಂದು ಆರೋಪಿಸಿ ವಕೀಲರು ಭಿತ್ತಿ ಪತ್ರ ಹಿಡಿದು ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದರು.