ಕೋಟೆನಾಡಲ್ಲಿ ಬೀದಿ ನಾಯಿಗಳ ಹಾವಳಿ: ನಗರಸಭೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ - chitradurga dog news
ಚಿತ್ರದುರ್ಗ ನಗರಸಭೆ ಸದಾ ಒಂದಲ್ಲ ಒಂದು ಸುದ್ದಿಯಲ್ಲಿರುತ್ತದೆ. ಇದೀಗ ಬೀದಿ ನಾಯಿಗಳನ್ನು ನಿಯಂತ್ರಿಸುವಲ್ಲಿ ನಗರಸಭೆ ಎಡವಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅದ್ರೆ ಬೀದಿ ನಾಯಿಗಳ ಉಪಟಳಕ್ಕೆ ಇದೀಗ ಪುಟ್ಟ ಬಾಲಕಿಯೊಬ್ಬಳು ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದು, ನಾಯಿಗಳನ್ನು ಹಿಡಿದು ಪುಣ್ಯಕಟ್ಟಿಕೊಳ್ಳಿ ಸ್ವಾಮಿ ಎಂದು ಸಾರ್ವಜನಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.