ಡಿಕೆಶಿ ಬಂಧನ ವಿಚಾರದಲ್ಲಿ ಆತುರದ ಹೇಳಿಕೆ ನೀಡದಂತೆ ಹೈಕಮಾಂಡ್ ಆದೇಶ: ರಾಜ್ಯ ಕೇಸರಿ ಪಡೆ ಸೈಲೆಂಟ್! - ಮಾಜಿ ಸಚಿವ ಡಿ.ಕೆ ಶಿವಕುಮಾರ್
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ವಿಚಾರ ಸಂಬಂಧ ಆತುರದ ಹೇಳಿಕೆ ನೀಡುವುದಕ್ಕೆ ಬಿಜೆಪಿ ಹೈಕಮಾಂಡ್ ನಿರ್ಬಂಧ ವಿಧಿಸಿದೆ. ಆತುರದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವುದರಿಂದ ಪಕ್ಷಕ್ಕೆ ಹಾನಿಯಾಗುವ ಸಾಧ್ಯತೆ ಇರುವ ಕಾರಣ, ರಾಜ್ಯ ನಾಯಕರ ಬಾಯಿಗೆ ಹೈಕಮಾಂಡ್ ಬ್ರೇಕ್ ಹಾಕಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಘಟಕಕ್ಕೆ ಹೈಕಮಾಂಡ್ ತುರ್ತು ಸಂದೇಶ ರವಾನಿಸಿದ್ದು, ಎಚ್ಚರ ವಹಿಸುವಂತೆ ಹೇಳಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೈಕಮಾಂಡ್ ಸಂದೇಶವನ್ನು ಪಕ್ಷದ ನಾಯಕರಿಗೆ ರವಾನಿಸಿದ್ದಾರೆ.
Last Updated : Sep 5, 2019, 7:00 AM IST