ಕೊರೊನಾ ವೈರಸ್ ಬಗ್ಗೆ ರಾಜ್ಯದ ಜನರು ಹೆದರುವ ಅವಶ್ಯಕತೆ ಇಲ್ಲ: ಶ್ರೀರಾಮುಲು - Corona Virus in Bengaluru
ಬೆಂಗಳೂರು: ಚೀನಾದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ವೈರಸ್ ಇದೀಗ ಭಾರತದಲ್ಲಿಯೂ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಕೊರೊನಾ ವೈರಸ್ ತಡೆಗಟ್ಟಲು ಈಗಾಗಲೇ ಆರೋಗ್ಯ ಇಲಾಖೆ ವತಿಯಿಂದ ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಜನರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.