ವರದಕ್ಷಿಣೆ ಕಿರುಕುಳಕ್ಕೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ - ಕ್ರೈಂ ನ್ಯೂಸ್
ಸರ್ಕಾರಗಳು ಅದೆಷ್ಟೇ ಜಾಗೃತಿ ಮೂಡಿಸಿದರು, ಕಾನೂನಿನಡಿ ಕಠಿಣ ಕ್ರಮಗಳನ್ನು ಕೈಗೊಂಡರೂ ವರದಕ್ಷಿಣೆ ಅನ್ನೋ ಭೂತಕ್ಕೆ ಮಹಿಳೆಯರು ಆತ್ಮಹತ್ಯೆಗೆ ಶರಣಾಗುವ ಪ್ರಕರಣಗಳು ನಿಂತಿಲ್ಲ.ವರದಕ್ಷಿಣೆ ಕಿರುಕುಳದಿಂದ ಬೇಸತ್ತ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅತ್ತನೂರಿನಲ್ಲಿ 28 ವರ್ಷದ ನಸೀಮಾ ತನ್ನ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.