ಅರ್ಜಿ ಸಲ್ಲಿಸಿದರೆ ಅನರ್ಹರು ಬಿಜೆಪಿಗೆ: ಡಾ. ಪ್ರಭಾಕರ ಕೋರೆ - ಲೆಟೆಸ್ಟ್ ಬೆಳಗಾವಿ ನ್ಯೂಸ್
ಅನರ್ಹರು ನಮ್ಮ ಪಕ್ಷಕ್ಕೆ ಸೇರಬೇಕಾದರೆ ಅರ್ಜಿ ಸಲ್ಲಿಸಬೇಕು, ಅವರು ಯಾವಾಗ ಅರ್ಜಿ ಸಲ್ಲಿಸುತ್ತಾರೋ ಆವಾಗ ಬಿಜೆಪಿಗೆ ಸೇರಿಸಿಕೊಳ್ಳಲಾಗುವುದೆಂದು ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ ಪ್ರತಿಕ್ರಿಯಿಸಿದ್ದಾರೆ. ಅನರ್ಹ ಶಾಸಕರ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ನೀಡಿರುವ ಆದೇಶವನ್ನು ಸ್ವಾಗತಿಸುತ್ತೇವೆ. ಎಲ್ಲಾ ಅನರ್ಹರಿಗೂ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿದ್ದು, ಅವರನ್ನು ಗೆಲ್ಲಿಸಲು ಬಿಜೆಪಿ ನಾಯಕರು ಪ್ರಯತ್ನ ಮಾಡಲಿದ್ದಾರೆ. ಇನ್ನು, ನಮ್ಮ ನಾಯಕರು ಅನರ್ಹರಿಗೆ ಟಿಕೆಟ್ ಕೊಟ್ಟರೆ ಅವರ ಪರವಾಗಿ ಕೆಲಸ ಮಾಡುತ್ತೇವೆ. ಬೇರೆಯವರಿಗೆ ಟಿಕೆಟ್ ಕೊಟ್ಟರೂ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಕೆಲಸ ಮಾಡುತ್ತೇವೆಂದರು. ಅಲ್ಲದೇ. ಕಾಂಗ್ರೆಸ್ನಲ್ಲಿನ ತಿಕ್ಕಾಟದಿಂದ 17 ಜನರು ಪಕ್ಷ ತೊರೆದಿದ್ದಾರೆ. ಹೀಗಾಗಿ ಮೈತ್ರಿ ಸರ್ಕಾರ ಉರುಳಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆಯೆಂದು ಕೋರೆ ಅಭಿಪ್ರಾಯ ವ್ಯಕ್ತಪಡಿಸಿದರು.