ದೇಶದಲ್ಲಿ ಮಹಾಘಟಬಂಧನ್ ಅಧಿಕಾರಕ್ಕೆ ಬರುವುದು ಖಚಿತ: ಪರಮೇಶ್ವರ್ - news kannada
ದೇಶದಲ್ಲಿ ಮಹಾಘಟಬಂಧನ್ ಅಂದರೆ ಯುಪಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಹೇಳಿದರು. ಈಟಿವಿ ಭಾರತ್ಗೆ ವಿಶೇಷ ಸಂದರ್ಶನ ನೀಡಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸಹಜವಾಗಿ ಚುನಾವಣಾ ಉಸ್ತುವಾರಿಯನ್ನು ನಾನೇ ತೆಗೆದುಕೊಂಡಿದ್ದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಹಿನ್ನೆಲೆ ಜೆಡಿಎಸ್ ಅಭ್ಯರ್ಥಿ, ಮಾಜಿ ಪ್ರಧಾನಿ ದೇವೇಗೌಡರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ ಸಹಜವಾಗಿಯೇ ಈ ಕ್ಷೇತ್ರದಲ್ಲಿ ಪ್ರಚಾರವು ರಂಗೇರಿತ್ತು ಎಂದರು.