ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಡಾ.ತೋಂಟದ ಮಹಾಸ್ವಾಮೀಜಿ ಮನವಿ - ಶ್ರೀ ಗದಗಿನ ತೋಂಟದಾರ್ಯ ಮಠದ ಡಾ.ತೋಂಟದ ಮಹಸ್ವಾಮೀಜಿ
ಬೆಳಗಾವಿ: ಸಮಸ್ತ ಭಾರತದ ದೇಶವಾಸಿಗಳ ರಕ್ಷಣೆಗಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶ ಪಾಲಿಸುವಂತೆ ಶ್ರೀ ಗದಗಿನ ತೋಂಟದಾರ್ಯ ಮಠದ ಡಾ.ತೋಂಟದ ಮಹಾಸ್ವಾಮೀಜಿಗಳು ಮನವಿ ಮಾಡಿಕೊಂಡಿದ್ದಾರೆ. ಕೊರೊನಾ ವೈರಸ್ ರೋಗವು ಇಡೀ ದೇಶವನ್ನೇ ತಲ್ಲಣಗೊಳಿಸಿದ್ದು, ಇದೊಂದು ಸಾಂಕ್ರಾಮಿಕ ರೋಗವಾಗಿದೆ. ಈ ನಿಟ್ಟಿನಲ್ಲಿ ಈ ರೋಗದಿಂದ ಬಚಾವ್ ಆಗಲು ಸಮಸ್ತ ಭಾರತದ ದೇಶ ವಾಸಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ವೈದ್ಯರು ಸೂಚಿಸಿದ ಸಲಹೆಗಳನ್ನು ಪಾಲಿಸಬೇಕು ಮತ್ತು ಕೊರೊನಾ ರೋಗ ಬರದಂತೆ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದಿದ್ದಾರೆ.