ಮೈಸೂರಿನಲ್ಲಿ ಕೊರೊನಾ ಲಸಿಕೆ ಅಭಿಯಾನಕ್ಕೆ ರೋಹಿಣಿ ಸಿಂದೂರಿ ಚಾಲನೆ - ಮೈಸೂರು ಲೇಟೆಸ್ಟ್ ನ್ಯೂಸ್
ಮೈಸೂರು: ದೇಶಾದ್ಯಂತ ಇಂದು ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಪ್ರಧಾನಿ ಭಾಷಣದ ಜಿಲ್ಲೆಯ 9 ಕಡೆ, 810 ಕೊರೊನಾ ವಾರಿಯರ್ಸ್ಗೆ ಲಸಿಕೆ ಹಾಕುವ ಅಭಿಯಾನವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಆರೋಗ್ಯ ಅಧಿಕಾರಿಗಳ ಸಮ್ಮುಖದಲ್ಲಿ ಪ್ರಾರಂಭಿಸಲಾಯಿತು. ನಗರದ ಮೇಟಗಳ್ಳಿ ಮೆಡಿಕಲ್ ಕಾಲೇಜ್ ಮತ್ತು ತುರ್ತು ಚಿಕಿತ್ಸಾ ಕೇಂದ್ರ, ಟಿ.ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಎಚ್.ಡಿ.ಕೋಟೆ, ಹುಣಸೂರು, ಕೆ.ಆರ್.ನಗರದ ತಾಲೂಕು ಆಸ್ಪತ್ರೆ ಹಾಗೂ ರಂಗ ಸಮುದ್ರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಹಾಕಲಾಗುತ್ತಿದೆ.