ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ನಿರ್ಧಾರ ಕೈಬಿಡುವಂತೆ ಆಗ್ರಹಿಸಿ ಡಿಎಸ್ಎಸ್ ಪ್ರತಿಭಟನೆ
ಸರ್ಕಾರ ಭೂಸುಧಾರಣೆ ಕಾಯ್ದೆ ತಿದ್ದುಪಡಿ ನಿರ್ಧಾರವನ್ನು ಕೈಬಿಡುವಂತೆ ಆಗ್ರಹಿಸಿ ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ಮಾಜಿ ಸಿಎಂ ದೇವರಾಜ್ ಅರಸು ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ ಸಮಗ್ರವಾಗಿ ತಿದ್ದುಪಡಿ ತರುವ ಮೂಲಕ ನಿಜವಾಗಿ ಶ್ರಮಿಕರಿಗೆ, ರೈತರಿಗೆ ನ್ಯಾಯ ಒದಗಿಸಿಕೊಟ್ಟಿದ್ದರು. ಆದ್ರೆ, ಈಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತರಲು ಹೊರಟಿರುವ ಭೂ ಸುಧಾರಣಾ ತಿದ್ದುಪಡಿಯು ರೈತರಿಗೆ, ಬಡವರಿಗೆ ಹಿಂದುಳಿದ ಜನಾಂಗಕ್ಕೆ ಮಾರಕವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.