ಹಾಸನ ಜಿಲ್ಲೆಯಲ್ಲಿ SSLC ಫಲಿತಾಂಶ ಕುಸಿಯಲು ಲಾಕ್ಡೌನ್ ಕಾರಣ: ಪ್ರಕಾಶ್ - SSLC Exam result-2020
ಹಾಸನ: ಉತ್ತಮ ಫಲಿತಾಂಶ ಬರಬೇಕೆಂಬ ಉದ್ದೇಶದಿಂದ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆವು. ಪ್ರತಿ ತಿಂಗಳು ಶಿಕ್ಷಕರು ಹಾಗೂ ಪೋಷಕರ ಸಭೆ ನಡೆಸಲಾಗಿತ್ತು. ಕೊರೊನಾ ಲಾಕ್‌ಡೌನ್‌ನಿಂದ ಮೂರು ತಿಂಗಳು ವಿದ್ಯಾರ್ಥಿಗಳಿಗೆ ನೇರವಾಗಿ ಪಾಠ ಮತ್ತು ಮಾರ್ಗದರ್ಶನ ನೀಡಲು ಸಾಧ್ಯವಾಗದ ಕಾರಣ ಫಲಿತಾಂಶ ಕುಸಿದಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪ್ರಕಾಶ್, ಈಟಿವಿ ಭಾರತಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.