ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ದುರ್ಯೋಧನ ಐಹೊಳೆ ಸ್ಪಷ್ಟನೆ - ಶಾಸಕ ದುರ್ಯೋಧನ ಐಹೋಳೆ
ಚಿಕ್ಕೋಡಿ: ಉಮೇಶ ಕತ್ತಿ ನನಗಿಂತ ಹಿರಿಯ ರಾಜಕಾರಣಿ. ಅವರಿಗೆ ಸಚಿವ ಸ್ಥಾನ ತಪ್ಪಿದೆ. ಆದ್ರೆ ಉಪಚುನಾವಣೆ ನಂತರ ಸ್ಥಾನ ಸಿಗುವ ವಿಶ್ವಾಸ ಇದೆ. ನನಗೆ ವೈಯಕ್ತಿಕವಾಗಿ ಯಾವುದೇ ಸಚಿವ ಸ್ಥಾನ, ನಿಗಮ ಮಂಡಳಿ ಸ್ಥಾನ ಬೇಡವೆಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಸ್ಪಷ್ಟನೆ ನೀಡಿದ್ದಾರೆ. ರಾಯಬಾಗ ಪಟ್ಟಣದ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ನಾಯಕ ಗೋವಿಂದ ಕಾರಜೋಳ ಡಿಸಿಎಂ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಯಡಿಯೂರಪ್ಪನವರು ಕೂಡ ನನ್ನ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲು ಒಪ್ಪಿದ್ದಾರೆ. ಹಾಗಾಗಿ ಕ್ಷೇತ್ರದಲ್ಲಿ ಕರಗಾಂವ್ ಏತ ನೀರಾವರಿ ಯೋಜನೆ ಸೇರಿದಂತೆ ಅನೇಕ ಕಾರ್ಯಗಳನ್ನು ಕೈಗೊಳ್ಳುವೆ ಎಂದು ತಿಳಿಸಿದರು.
Last Updated : Oct 17, 2019, 7:03 PM IST