ಶಾಲೆ ಆರಂಭದ ಬಗ್ಗೆ 'ಈಟಿವಿ ಭಾರತ' ಜೊತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತು
ತುಮಕೂರು: ಆಗಸ್ಟ್ ತಿಂಗಳ ನಂತರ ಶಾಲೆಗಳನ್ನು ಆರಂಭಿಸುವ ಕುರಿತು ಯೋಚಿಸಲಾಗುವುದು. ಅಲ್ಲದೆ ಮೊದಲಿಗೆ ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳನ್ನು ಆರಂಭಿಸಲಾಗುವುದು. ಆ ನಂತರ ಪ್ರಾಥಮಿಕ ಶಾಲೆ ಆರಂಭದ ಕುರಿತು ಚಿಂತನೆ ನಡೆಸುವ ಯೋಜನೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. 'ಈಟಿವಿ ಭಾರತ' ಜೊತೆ ತುಮಕೂರಿನಲ್ಲಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯಲ್ಲಿ 8 ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ್ದು, ವಿದ್ಯಾರ್ಥಿಗಳಲ್ಲಿ ನವಚೈತನ್ಯ ಮೂಡಿದೆ. ಅಲ್ಲದೆ ಎಲ್ಲಾ ಇಲಾಖೆಯ ಸಮನ್ವಯತೆಯೊಂದಿಗೆ ಎಸ್ಎಸ್ಎಲ್ಸಿ ಪರೀಕ್ಷೆ ಸರ್ಕಾರದ ಪೂರ್ವ ನಿರ್ಧಾರದಂತೆ ನಡೆಯುತ್ತಿದೆ ಎಂದು ತಿಳಿಸಿದರು.
TAGGED:
Tumakuru