ದಾವಣಗೆರೆ ಜಿಲ್ಲೆಯಾದ್ಯಂತ ಈದ್ ಮಿಲಾದ್ ಸಡಗರ - Eid Milad celebration in Davanagere
ದಾವಣಗೆರೆ: ಜಿಲ್ಲೆಯಾದ್ಯಂತ ಸಡಗರ, ಸಂಭ್ರಮದಿಂದ ಈದ್ ಮಿಲಾದ್ ಹಬ್ಬವನ್ನು ಮುಸ್ಲೀಮರು ಆಚರಿಸಿದರು. ದಾವಣಗೆರೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಮುಸ್ಲೀಮರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಜಯದೇವ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಗೊಂಡು ನಂತರ ಮಸೀದಿಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ರು.