ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್: ರಸ್ತೆಗೆ ಬಿದ್ದ ವಿದ್ಯುತ್ ತಂತಿ - ರಾಯಚೂರು ಲೆಟೆಸ್ಟ್ ನ್ಯೂಸ್
ರಾಯಚೂರು: ವೇಗವಾಗಿ ಬಂದ ಟ್ರ್ಯಾಕ್ಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ತಂತಿಗಳು ರಸ್ತೆಯಲ್ಲೇ ಬಿದ್ದಿರುವ ಘಟನೆ ಜಿಲ್ಲೆಯ ಮಸ್ಕಿ ಪಟ್ಟಣದ ರಾಮಕೃಷ್ಣ ಕಾಲೋನಿಯಲ್ಲಿ ನಡೆದಿದೆ. ಇದರಿಂದ ಬಡಾವಣೆ ನಿವಾಸಿಗಳು ಆತಂಕಗಗೊಂಡಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಜೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.