ಶರವೇಗದಲ್ಲಿ ಸ್ಮಾರ್ಟ್ ಸಿಟಿ ಕೆಲಸ ಸಾಗುತ್ತೆ: ಈಶ್ವರಪ್ಪ ಭರವಸೆ - ಮುಖ್ಯಮಂತ್ರಿ ಯಡಿಯೂರಪ್ಪ
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ, ಈ ಹಿಂದೆ ಇಲಾಖೆ ಇಲಾಖೆಗಳ ನಡುವೆ ಸಮನ್ವಯ ಸರಿ ಇಲ್ಲದ್ದರಿಂದ ಸ್ಮಾರ್ಟ್ ಸಿಟಿ ಕೆಲಸಕ್ಕೆ ಹಿನ್ನಡೆಯಾಗಿತ್ತು. ಆದರೆ ಇಂದು ಇಲಾಖೆಗಳ ನಡುವೆ ಇದ್ದ ಗೊಂದಲ ಬಗೆಹರಿದಿದ್ದರಿಂದ ಕೆಲಸದ ವೇಗ ಹೆಚ್ಚಿದೆ. ಕಳೆದ ವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಣಿವಣ್ಣನ್ ಸೇರಿದಂತೆ ವಿವಿಧ ಅಧಿಕಾರಿಗಳ ಸಭೆ ಕರೆದು ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ ಎಂದು ತಿಳಿಸಿದರು.