ಕೊರೊನಾ ವಾರಿಯರ್ಸ್ ಮೇಲೆ ಹೂ ಮಳೆ ಸುರಿಸಿದ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ - ತುರುವೇಕರೆ
ಕೋವಿಡ್ ಹರಡುವಿಕೆ ತಡೆಗಟ್ಟಲು ನಿರಂತರವಾಗಿ ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್ ಮೇಲೆ ಜನರು ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದಾರೆ. ತುರುವೇಕರೆ ಪಟ್ಟಣದಲ್ಲಿ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ನೇತೃತ್ವದಲ್ಲಿ ತಾಲೂಕು ಆಸ್ಪತ್ರೆ ಆವರಣದಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪೊಲೀಸರು, ಹೋಂಗಾಡ್ಸ್ ಸಿಬ್ಬಂದಿ ಮೇಲೆ ಪುಷ್ಪವೃಷ್ಟಿ ಮಾಡಿ ವಿಶೇಷ ಗೌರವ ಸೂಚಿಸಿದರು.