ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ಕೊಪ್ಪಳದಲ್ಲಿ ಸಂಭ್ರಮಾಚರಣೆ
ಕೊಪ್ಪಳ: ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಿದ ಹಿನ್ನೆಲೆಯಲ್ಲಿ ಕೊಪ್ಪಳ ನಗರದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ನಗರದ ಅಶೋಕ ಸರ್ಕಲ್ನಲ್ಲಿ ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಅತ್ಯಾಚಾರಿಗಳಿಗೆ ಈ ರೀತಿ ಗಲ್ಲು ಶಿಕ್ಷೆ ವಿಧಿಸಬೇಕು. ಇದೊಂದು ಎಚ್ಚರಿಕೆಯ ಗಂಟೆಯಾಗಿದ್ದು, ನಿರ್ಭಯಾ ಕುಟುಂಬಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದು ಘೋಷಣೆ ಕೂಗಿದರು.