ಉತ್ತರ ಕನ್ನಡದಲ್ಲಿ ವರುಣನ ಅಬ್ಬರ.. ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಕಾರವಾರ: ಉತ್ತರಕನ್ನಡ ಜಿಲ್ಲೆಯ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮಳೆ ಅಬ್ಬರಿಸುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರಿಕೆ ತೆರಳದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಕಳೆದ ಎರಡು ದಿನಗಳಿಂದ ಬಿಟ್ಟು ಬಿಟ್ಟು ಸುರಿಯುತ್ತಿದ್ದ ಮಳೆ ಇಂದು ಜೋರಾಗಿದೆ. ಕರಾವಳಿಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಮತ್ತು ಮಲೆನಾಡಿನ ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗಗಳಲ್ಲಿ ಮಳೆ ಸುರಿಯುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.