ಕೊರೊನಾ ಲಸಿಕೆ ಹಾಕಿಸಿಕೊಂಡವರ ಅನುಭವದ ಮಾತುಗಳಿವು!
ಕಲಬುರಗಿ: ಕೊರೊನಾ ಹಾಟ್ಸ್ಪಾಟ್ ಕಲಬುರಗಿಯಲ್ಲಿ ಕೋವಿಡ್ ಲಸಿಕೆಗೆ ಚಾಲನೆ ಸಿಕ್ಕಿದ್ದು, ಕಲಬುರಗಿಯ ಜಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಲಸಿಕೆ ವ್ಯಾಕ್ಸಿನೇಷನ್ ಪ್ರಕ್ರಿಯೆ ಆರಂಭಗೊಂಡಿದೆ. ಜಿಮ್ಸ್ ಆಸ್ಪತ್ರೆಯ ಡಿ-ಗ್ರೂಪ್ ಸಿಬ್ಬಂದಿ ಅನಂತ್ ಎಂಬವವರಿಗೆ ಮೊದಲ ಲಸಿಕೆ ನೀಡಲಾಯಿತು. ಅನಂತ ಈ ಬಗ್ಗೆ ಅನಿಸಿಕೆ ಹಂಚಿಕೊಂಡು ಮೊದಲ ಲಸಿಕೆ ಹಾಕಿಸಿಕೊಂಡ ಬಗ್ಗೆ ಹೆಮ್ಮೆ ಅನಿಸುತ್ತದೆ. ಮುಂದೆ ಕೊರೊನಾ ಸಂಕಷ್ಟ ಎದುರಾಗಲ್ಲ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.