ರಾಮನಗರ ಪುರಸಭೆ ಕಾರ್ಯಾಚರಣೆ: 70ಕ್ಕೂ ಹೆಚ್ಚು ಅಂಗಡಿಗಳ ತೆರವು - ಬಿಡದಿ ಪುರಸಭೆ
ರಾಮನಗರ : ಬಿಡದಿ ಪುರಸಭೆ ವ್ಯಾಪ್ತಿಯಲ್ಲಿ ಸಂಚಾರಕ್ಕೆ ತೊ೦ದರೆ ಉಂಟು ಮಾಡುತ್ತಿದ್ದ ರಸ್ತೆಬದಿಯ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯ ಮಾಡಲಾಯಿತು. ಬಿಡದಿ ಪುರಸಭೆ ಕಚೇರಿ ರಸ್ತೆ ಮತ್ತು ಬೆಂಗಳೂರು - ಮೈಸೂರು ಹೆದ್ದಾರಿ ಬದಿಯಲ್ಲಿ ರಸ್ತೆಗೆ ಹೊಂದಿಕೊಂಡಂತೆ ಅ೦ಗಡಿಗಳನ್ನು ನಿರ್ಮಿಸಿ ಕೆಲವರು ವ್ಯಾಪಾರ ಮಾಡುತ್ತಿದ್ದರು. ಇದರಿಂದ ಸಾರ್ವಜನಿಕರು ಮತ್ತು ವಾಹನಗಳ ಓಡಾಟಕ್ಕೆ ತೊಂದರೆ ಹೆಚ್ಚಾಗಿತ್ತು. ಈ ಸಂಬಂಧ ಸಾರ್ವಜನಿಕರಿಂದಲೂ ದೂರುಗಳು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಪುರಸಭೆ ವತಿಯಿಂದ ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಯಿತು. ಕಾರ್ಯಾಚರಣೆಯಲ್ಲಿ ಸುಮಾರು 70ಕ್ಕೂ ಹೆಚ್ಚು ಅಂಗಡಿಗಳನ್ನು ತೆರವು ಮಾಡಲಾಯಿತು.