ವಾಹನ ಸವಾರರೇ ಹುಷಾರ್! ಸಂಚಾರ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಭಾರಿ ದಂಡ - ರಾಜ್ಯಸಭೆ ಅನುಮೋದನೆ
ಸಂಚಾರ ನಿಯಮ ಉಲ್ಲಂಘನೆ ಕುರಿತ ಮೋಟಾರು ವಾಹನ ತಿದ್ದುಪಡಿ ಕಾಯ್ದೆಗೆ ರಾಜ್ಯಸಭೆ ಅನುಮೋದನೆ ನೀಡಿದ್ದು, ಈಗ ಅಧಿಕೃತವಾಗಿ ಜಾರಿಗೆ ಬಂದಿದೆ. ಹೀಗಾಗಿ ನಗರದೆಲ್ಲೆಡೆ ಆಯಾ ಠಾಣಾ ವ್ಯಾಪ್ತಿಯ ಸಿಬ್ಭಂದಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರನ್ನು ಹಿಡಿದು ದಂಡ ಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ.