ಮುದ್ದೇಬಿಹಾಳ: ಜನರ ಪ್ರೀತಿಗೆ ಭಾವುಕರಾದ ಪಿಎಸ್ಐ ಮಲ್ಲಪ್ಪ ಮಡ್ಡಿ - PSI Mallappa reddy
ಮುದ್ದೇಬಿಹಾಳ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ನಿರ್ಗಮಿತ ಪಿಎಸ್ಐ ಮಲ್ಲಪ್ಪ ಮಡ್ಡಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಹಾಗೂ ನೂತನ ಪಿಎಸ್ಐ ಭೀಮನಗೌಡ ಬಿರಾದಾರ ಅವರಿಗೆ ಸ್ವಾಗತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದೇ ವೇಳೆ ಎರಡೂವರೆ ವರ್ಷಕ್ಕಿಂತ ಹೆಚ್ಚು ಕಾಲ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸಿದ ಮಲ್ಲಪ್ಪ ಮಡ್ಡಿ ತಮ್ಮ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡುವಾಗ ಭಾವುಕರಾದರು.