ಬಸವಸಾಗರ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣಾ ನದಿ ತೀರದ ರೈತರ ಜಮೀನು ಜಲಾವೃತ
ಯಾದಗಿರಿ: ಮಹಾರಾಷ್ಟ್ರದಲ್ಲಿ ಭಾರೀ ಮಳೆ ಹಿನ್ನೆಲೆ ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪರಿಣಾಮ ಜಿಲ್ಲೆಯ ನದಿ ಪಾತ್ರದ ಜನರಿಗೆ ಪ್ರವಾಹದ ಭೀತಿ ಶುರುವಾಗಿದೆ. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡಲಾಗಿದ್ದು, ನದಿ ತೀರದ ರೈತರ ಜಮೀನುಗಳಿಗೆ ನೀರು ನುಗ್ಗಿದೆ. ರೈತರು ಬೆಳೆದ ಹತ್ತಿ, ಭತ್ತ, ಹೆಸರು, ಉದ್ದು, ಬೆಳೆಗಳು ಸಂಪೂರ್ಣ ಜಲಾವೃತಗೊಂಡಿವೆ. ಕೃಷ್ಣಾ ನದಿ ತೀರದ ಶಹಪುರ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ನೂರಾರು ಎಕರೆ ಬೆಳೆ ನೀರು ಪಾಲಾಗಿದ್ದು, ಅಲ್ಲಿನ ರೈತ ಭವಣೆಯ ಕುರಿತ ಪ್ರತ್ಯಕ್ಷ ವರದಿ ಇಲ್ಲಿದೆ.
Last Updated : Aug 18, 2020, 9:29 PM IST