ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬ್ಯಾಡಗಿಯಲ್ಲಿ ರೈತರಿಂದ ಬೃಹತ್ ಪ್ರತಿಭಟನೆ - ಹಾವೇರಿ ಜಿಲ್ಲಾ ಸುದ್ದಿ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು. ಬ್ಯಾಡಗಿಯ ಪ್ರಮುಖ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ರೈತರು, ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು. ತಾಲೂಕಿನ ಆಣೂರು ಕೆರೆಗೆ ನೀರು ತುಂಬಿಸಬೇಕು, ರೈತರ ಬೆಳೆವಿಮೆ ಪಾವತಿಸಬೇಕು ಹಾಗೂ ಬ್ಯಾಡಗಿಯ ಮುಖ್ಯರಸ್ತೆ ಅಗಲೀಕರಣ ಮಾಡುವಂತೆ ರೈತರು ಒತ್ತಾಯಿಸಿದರು. ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರೈತರು ತಮ್ಮ ಬೇಡಿಕೆ ಈಡೇರುವವರೆಗೆ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಪಟ್ಟುಹಿಡಿದರು. ಪ್ರತಿಬಾರಿ ಪ್ರತಿಭಟನೆ ನಡೆದಾಗ ಸಹ ಭರವಸೆ ನೀಡಲಾಗುತ್ತೆ. ಆದ್ರೆ ಪರಿಹಾರ ಸಿಕ್ಕಿಲ್ಲವೆಂದು ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಕಿಡಿಕಾರಿದರು.