ಹಾವೇರಿ: ರೈತ ಸಂಘಟನೆಗಳಿಂದ ಟ್ರ್ಯಾಕ್ಟರ್ ಪರೇಡ್ - tractor rally in haveri news
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಹಾವೇರಿಯಲ್ಲಿ ವಿವಿಧ ರೈತ ಸಂಘಟನೆಗಳು ಟ್ರ್ಯಾಕ್ಟರ್ ಪರೇಡ್ ನಡೆಸಿದವು. ನಗರದ ಮುರುಘಾ ಮಠದಿಂದ ಆರಂಭವಾದ ಪರೇಡ್‌ನಲ್ಲಿ ಸಾವಿರಕ್ಕೂ ಅಧಿಕ ಟ್ರ್ಯಾಕ್ಟರ್‌ಗಳು ಭಾಗಿಯಾಗಿದ್ದವು. ನಗರದ ಪ್ರಮುಖ ಬೀದಿಗಳಲ್ಲಿ ಟ್ರ್ಯಾಕ್ಟರ್ ಪರೇಡ್ ನಡೆಸಿದ ರೈತರು, ನಂತರ ಮುನ್ಸಿಪಲ್ ಮೈದಾನದಲ್ಲಿ ಬೃಹತ್ ಸಭೆ ನಡೆಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.