ಸರ್ಕಾರದ ವಿರುದ್ಧ ತೀವ್ರಗೊಂಡ ರೈತರ ಪ್ರತಿಭಟನೆ, ರಸ್ತೆ ಮೇಲೆ ಅಡುಗೆ ಮಾಡಿ ಆಕ್ರೋಶ... - ಜಿಲ್ಲಾಧಿಕಾರಿ ಕಚೇರಿ
ರೈತರ ಸಂಕಷ್ಟಗಳಿಗೆ ಸರ್ಕಾರ ಯಾವುದೇ ಸ್ಪಂದನೆ ನೀಡಿಲ್ಲವೆಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಯುತ್ತಿದ್ದು. ರಸ್ತೆಯ ಮೇಲೆ ರೈತರು ಅಡುಗೆ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಪ್ರವಾಹ ಉಂಟಾದ ನಿರಾಶ್ರಿತರಿಗೆ ಸರ್ಕಾರ ಪರಿಹಾರ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಇಂದು ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದು. ನಗರದ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.