ರಸ್ತೆ ಮೇಲೆ ಮಲಗಿದ್ದೇವೆ, ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಲಿ: ಹುಬ್ಬಳ್ಳಿಯಲ್ಲಿ ರೈತರ ಎಚ್ಚರಿಕೆ - hubli latest news
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದೆ. ಹಳೇ ಬಸ್ ನಿಲ್ದಾಣ ಬಳಿಯ ಚೆನ್ನಮ್ಮ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಚೆನ್ನಮ್ಮ ಸರ್ಕಲ್ನಲ್ಲಿ ರಸ್ತೆ ಮೇಲೆ ಮಲಗಿ ವಿನೂತನವಾಗಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.