ಕೈಗೆ ಬಂದ ತುತ್ತು ಬಾಯಿಗೆ ಬರಲ್ಲ.. ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕಿ ತಮ್ಮ ಅಳಲು ತೋಡಿಕೊಂಡ ರೈತರು! - Raichur
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರಿಗೆ ರೈತರು ಮುತ್ತಿಗೆ ಹಾಕಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಮಸ್ಕಿ ವಿಧಾನಸಭಾ ಉಪಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಅವರು, ಸಂತೆಕಲ್ಲೂರು ಮಾರ್ಗವಾಗಿ ತೆರಳುವ ವೇಳೆ ಏಕಾಏಕಿ ಬಂದ ರೈತರು ಮುತ್ತಿಗೆ ಹಾಕಿದರು. ತುಂಗಭದ್ರಾ ಎಡದಂಡೆ ನಾಲೆಗೆ 2021 ಏ.10ರವರೆಗೆ ನೀರು ಬಿಡಲು ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಇಲ್ಲದಿದ್ದರೆ ಬೆಳೆದು ನಿಂತಿರುವ ಭತ್ತದ ಫಸಲು ನಾಶವಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗುತ್ತದೆ ಎಂದು ರೈತರು ತಮ್ಮ ಅಳಲು ತೋಡಿಕೊಂಡರು. ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ರು.