ಹೇಮಾವತಿಯಲ್ಲಿ ಮತ್ತೆ ಪ್ರವಾಹದ ಭೀತಿ; ಎಚ್ಚರಿಕೆ ವಹಿಸುವಂತೆ ಸೂಚನೆ - ಮಂಡ್ಯ ಸುದ್ದಿ
ಹೇಮಾವತಿ ನದಿಯಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದ್ದು, ಗೊರೂರು ಜಲಾಶಯದಿಂದ 30 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದೆ. ಕೆ.ಆರ್.ಪೇಟೆ ತಾಲ್ಲೂಕಿನ ಭಾಗದಲ್ಲಿ ನದಿಯ ಸೆಳೆತ ಹೆಚ್ಚಾಗಿರುವುದರಿಂದ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಜನರಿಗೆ ಎಚ್ಚರಿಕೆ ನೀಡಿದೆ.ನದಿಗೆ ಇಳಿಯದಂತೆ ತಾಲೂಕು ಆಡಳಿತ ಮನವಿ ಮಾಡಿದ್ದು, ರಾತ್ರಿ ವೇಳೆಗೆ ಮತ್ತಷ್ಟು ನೀರು ಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.