ಕೊಪ್ಪಳದಲ್ಲಿ ಸಾಂಕ್ರಾಮಿಕ ರೋಗ ಭೀತಿ... ರೋಗಿಗಳಿಂದ ತುಂಬಿದ ಆಸ್ಪತ್ರೆಗಳು
ಮಳೆ ಬಂದ್ರೂ ಚಿಂತೆ, ಬಾರದಿದ್ದರೂ ಸಮಸ್ಯೆ ತಪ್ಪಿದ್ದಲ್ಲ. ಕೊಪ್ಪಳ ಜಿಲ್ಲೆಯಲ್ಲಿ ಕಳೆದ ವಾರ ಸುರಿದ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತ್ತಾದ್ರೂ ಮತ್ತೊಂದೆಡೆ ಸಾಂಕ್ರಾಮಿಕ ರೋಗ ಭೀತಿ ಎದುರಾಗಿದೆ. ಪರಿಣಾಮ ಜಿಲ್ಲಾಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ತುಂಬಿಹೋಗಿವೆ.