ಅರಕಲಗೂಡಲ್ಲಿ ಮಾಸ್ಕ್ ಧರಿಸದ ವ್ಯಕ್ತಿಗೆ ಬಿತ್ತು ದಂಡ..! - ಅರಕಲಗೂಡಿನಲ್ಲಿ ಮಾಸ್ಕ್ ಧರಿಸದ ವ್ಯಕ್ತಿಗೆ ದಂಡ..!
ಅರಕಲಗೂಡು: ಪಟ್ಟಣದಲ್ಲಿ ಮಾಸ್ಕ್ ಧರಿಸದೇ ಜನರು ಬೇಕಾಬಿಟ್ಟಿ ಓಡಾಡುತ್ತಿದ್ದಾರೆ ಎಂಬುದನ್ನು ಅರಿತ ಅಧಿಕಾರಿಗಳು ವ್ಯಕ್ತಿವೋರ್ವನಿಗೆ ನೂರು ರೂಪಾಯಿ ದಂಡ ಜಡಿದಿದ್ದಾರೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಬಸವರಾಜ್, ಹಾಗೂ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ವೈ.ಎಂ. ರೇಣುಕುಮಾರ್ ಮತ್ತು ಎಸಿ ನಂದನ್ ಕುಮಾರ್ ಸಹ ರಸ್ತೆಗಿಳಿದು ಮಾಸ್ಕ್ ಧರಿಸದವರಿಗೆ ದಂಡದ ಬಿಸಿ ಮೂಡಿಸಿದರು.
Last Updated : Sep 9, 2020, 12:49 PM IST