ಶಾರ್ಟ್ ಸರ್ಕ್ಯೂಟ್ನಿಂದ ವಿಧಾನಸೌಧದ 2ನೇ ಮಹಡಿಯಲ್ಲಿ ಅಗ್ನಿ ಅವಘಡ - ವಿಧಾನಸೌಧದಲ್ಲಿ ಕಾಣಿಸಿಕೊಂಡ ಬೆಂಕಿ
ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದ ಎರಡನೇ ಮಹಡಿಯಲ್ಲಿ ಎಲೆಕ್ಟ್ರಿಕ್ ಶಾರ್ಟ್ ಸಕ್ಯೂರ್ಟ್ ನಿಂದ ಅಗ್ನಿ ಅನಾಹುತ ಸಂಭವಿಸಿದೆ. ನೋಡ ನೋಡುತ್ತಿದ್ದಂತೆ ಅಗ್ನಿಯ ಕೆನ್ನಾಲಿಗೆ ವ್ಯಾಪಿಸಿದೆ. ವಿಷಯ ತಿಳಿಯುತ್ತಿದ್ದಂತೆ ಎರಡು ಅಗ್ನಿಶಾಮಕ ವಾಹನಗಳಲ್ಲಿ ಬಂದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ, ಅದೃಷ್ಟವಶಾತ್ ಹೆಚ್ಚಿನ ರೀತಿಯ ಹಾನಿಯಾಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.