ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿ ಉರಿದ ಕಿರಾಣಿ ಅಂಗಡಿ - ಹುಬ್ಬಳ್ಳಿ ದಿನಸಿ ಅಂಗಡಿಯಲ್ಲಿ ಬೆಂಕಿ
ಹುಬ್ಬಳ್ಳಿ : ಕಿರಾಣಿ ಅಂಗಡಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಹೋಗಿರುವ ಘಟನೆ ತಾಲೂಕಿನ ಕೋಳಿವಾಡ ಗ್ರಾಮದಲ್ಲಿ ನಡೆದಿದೆ. ಶಂಭು ಜಂತ್ಲಿ ಎಂಬವರಿಗೆ ಸೇರಿದ ಅಂಗಡಿಗೆ ಬೆಂಕಿ ತಗುಲಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಶಾಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.