ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ, ಕಂಪ್ಯೂಟರ್, ಯುಪಿಎಸ್ ಬೆಂಕಿಗಾಹುತಿ - ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿ
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದ ಕೋರ್ಟ್ ಹಿಂಭಾಗ ಸೆಂಟರ್ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕಂಪ್ಯೂಟರ್, ಯುಪಿಎಸ್ ಸೇರಿದಂತೆ ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಖಾಜೆಸಾಬ ಮಕಾನದಾರ ಎಂಬುವರ ಮನೆಗೂ ಬೆಂಕಿ ತಗುಲಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.