ಬಳ್ಳಾರಿಯಲ್ಲಿ ಧಗ ಧಗನೆ ಹೊತ್ತಿ ಉರಿದ ಕಾರು... ಪ್ರಾಣಾಪಾಯದಿಂದ ದಂಪತಿ ಪಾರು - ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ
ಚಲಿಸುತ್ತಿದ್ದ ಕಾರಿನೊಳಗೆ ದಿಢೀರನೆ ಬೆಂಕಿ ಕಾಣಿಸಿಕೊಂಡಿದ್ದು, ಕಾರ್ನೊಳಗಿದ್ದ ದಂಪತಿ ಅಪಾಯದಿಂದ ಪಾರಾಗಿರುವ ಘಟನೆ ಬಳ್ಳಾರಿಯ ಪೋಲಾ ಪ್ಯಾರಡೈಸ್ ಹೋಟೆಲ್ ಮುಂಭಾಗದ ರಸ್ತೆಯಲ್ಲಿ ನಡೆದಿದೆ. 2009ರ ಮಾಡೇಲ್ನ ಐಕಾನ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಸುಟ್ಟು ಕರಕಲಾಗಿದೆ ಎಂದು ಮೂಲಗಳು ತಿಳಿಸಿವೆ.