ಮಂಗಳೂರಿನಲ್ಲಿ ಗುಜರಿ ಅಂಗಡಿಗೆ ಬೆಂಕಿ: ಅಪಾರ ನಷ್ಟ - ಬಂದರ್ ಸಮೀಪ ಬೆಂಕಿ
ಮಂಗಳೂರು: ಬಂದರು ಸಮೀಪದ ಗುಜರಿ ಅಂಗಡಿಗೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದೆ.ಬಂದರು ಸಮೀಪದ ಬಿ ಬಿ ಅಲಾಬಿ ರಸ್ತೆಯಲ್ಲಿರುವ ಗುಜರಿ ಅಂಗಡಿಗೆ ಮುಂಜಾನೆ 5 ಗಂಟೆಯ ವೇಳೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಗುಜರಿ ಅಂಗಡಿಯಲ್ಲಿದ್ದ ಬ್ಯಾಟರಿಯಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಬೆಂಕಿಯ ಕೆನ್ನಾಲಗೆಗೆ ಗುಜರಿ ಅಂಗಡಿಯಲ್ಲಿದ್ದ ಸಾಮಗ್ರಿಗಳು ಭಸ್ಮವಾಗಿದೆ. ಪಾಂಡೇಶ್ವರ ಠಾಣೆಯ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ.