ಹುಲ್ಲಿನ ಮೆದೆಗಳಿಗೆ ಬೆಂಕಿ: ರಾಜಕೀಯ ದ್ವೇಷದ ಶಂಕೆ - mandya fire case
ಮಂಡ್ಯ: ರಾಜಕೀಯ ದ್ವೇಷದ ಹಿನ್ನೆಲೆ ಹುಲ್ಲಿನ ಮೆದೆಗಳಿಗೆ ಬೆಂಕಿ ಹಾಕಿರುವ ಘಟನೆ ಮಂಡ್ಯ ತಾಲೂಕಿನ ಮಲ್ಲಿಗೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರಳೆಕೆರೆ ಗ್ರಾಮದಲ್ಲಿ ನಡೆದಿದೆ. ರೈತ ಸಂಘ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗ್ರಾಮ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಈ ದ್ವೇಷದ ಹಿನ್ನೆಲೆ, ರೈತ ಸಂಘ ಮತ್ತು ಕಾಂಗ್ರೆಸ್ ಬೆಂಬಲಿತರ ಹುಲ್ಲಿನ ಮೆದೆಗಳಿಗೆ ಜೆಡಿಎಸ್ ಕಾರ್ಯಕರ್ತರು ಬೆಂಕಿ ಹಚ್ಚಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಲಕ್ಷಾಂತರ ರೂ. ಬೆಲೆ ಬಾಳುವ ಹುಲ್ಲು ಸುಟ್ಟು ಹೋಗಿದ್ದು, ಸಂಬಂಧಪಟ್ಟವರು ಮಂಡ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟಿದ್ದಾರೆ.