ಕರ್ನಾಟಕ

karnataka

ETV Bharat / videos

ಕಾರವಾರ: ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಕಾರು! - karwar News 2021

By

Published : Apr 23, 2021, 9:55 AM IST

ಕಾರವಾರ: ಶಾರ್ಟ್ ಸರ್ಕ್ಯೂಟ್​ನಿಂದಾಗಿ ಕಾರೊಂದು ಹೊತ್ತಿ ಉರಿದಿರುವ ಘಟನೆ ಕುಮಟಾ ತಾಲೂಕಿನ ಹೊಳೆಗದ್ದೆ ಟೋಲ್ ಗೇಟ್‌ನಲ್ಲಿ ನಡೆದಿದೆ. ಹೊನ್ನಾವರ ಮೂಲದ ವ್ಯಕ್ತಿಯೋರ್ವರಿಗೆ ಸೇರಿದ ಕಾರು ಇದಾಗಿದ್ದು, ಕುಮಟಾದಿಂದ ಹೊನ್ನಾವರಕ್ಕೆ ತೆರಳುತ್ತಿರುವಾಗ ಹೊಳೆಗದ್ದೆ ಟೋಲ್‌ ಗೇಟ್ ಬಳಿ ಇದ್ದಕ್ಕಿಂದ್ದಂತೆ ಕಾರಿನ‌ ಮುಂಭಾಗ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ವಾಹನ ನಿಲ್ಲಿಸಿ, ಚಾಲಕ ಹೊರಗಡೆ ಬಂದಿದ್ದಾರೆ. ಆದರೆ ನೋಡ ನೋಡುತ್ತಿದ್ದಂತೆ ಕಾರಿನಲ್ಲಿ ಬೆಂಕಿ ಹೊತ್ತಿ ಉರಿಯತೊಡಗಿದೆ. ತಕ್ಷಣ ಟೋಲ್ ಗೇಟ್ ಸಿಬ್ಬಂದಿ ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ. ಚಾಲಕ ಕೂಡ ಅಪಾಯದಿಂದ ಪಾರಾಗಿದ್ದು, ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details