ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಅಗ್ನಿ ಅವಘಡ - ವಿಡಿಯೋ - ಆನೇಕಲ್ನಲ್ಲಿ ಗುಜರಿ ಸಂಗ್ರಹಾಗಾರಕ್ಕೆ ಬೆಂಕಿ
ಆನೇಕಲ್: ಗುಜರಿ ಸಂಗ್ರಹಾಗಾರಕ್ಕೆ ಬೆಂಕಿ ತಗುಲಿ ಅಪಾರ ಪ್ರಮಾಣದ ಗುಜರಿ ವಸ್ತುಗಳು ಬೆಂಕಿಗಾಹುತಿಯಾಗಿವೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಮೇಲ್ನೋಟಕ್ಕೆ ವಿದ್ಯುತ್ ಸ್ಪರ್ಶದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಕಂಪನಿಗಳಿಗೆ ಬಳಸುತ್ತಿದ್ದ ಕೆಲ ನಿರುಪಯುಕ್ತ ವಸ್ತುಗಳು ಬಳಸಿದ ವಸ್ತುಗಳನ್ನಿಟ್ಟಿದ್ದ ಸಂಗ್ರಹಾಗಾರ ಇದಾಗಿದೆ. ಕೈಗಾರಿಕಾ ಪ್ರದೇಶದಲ್ಲಿದ್ದುದರಿಂದ ತಕ್ಷಣ ಮೂರು ಅಗ್ನಿಶಾಮಕದಳದ ವಾಹನಗಳು ಬಂದರೂ ಬೆಂಕಿ ಹತೋಟಿಗೆ ತರಲು ಹರಸಾಹಸ ಪಡಬೇಕಾಗಿದೆ. ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.